ಬೆಂಗಳೂರು: ಏಪ್ರಿಲ್ 26ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಸೇರಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಹೊರಟ ಬೆನ್ನಿಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 4 ಕೊನೆಯ ದಿನ. ಏಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಏಪ್ರಿಲ್ 26ರಂದು ಮತದಾನ ನಡೆದರೂ ಫಲಿತಾಂಶಕ್ಕಾಗಿ ಜೂನ್ 4ರ ತನಕ ಕಾಯಬೇಕಿದೆ.
ನಾಳೆ ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಪ್ರಕಟ































































