ದಾಖಲೆ ರಹಿತ 5 ಕೆಜಿ ಚಿನ್ನ ವಶ

ಬೆಂಗಳೂರು: ದಾಖಲೆ ಇಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಸುಮಾರು 5 ಕೆಜಿ ಚಿನ್ನಾಭರಣವನ್ನು ಪೊಲೀಸರು ಚಿತ್ರದುರ್ಗದಲ್ಲಿ ವಶಪಡಿಸಿಕೊಂಡಿದ್ದಾರೆ. ಚಿನ್ನಾಭರಣವನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಹಿರಿಯೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆ 5.250 ಕೆಜಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಇದು ದಾವಣಗೆರೆಯ ವರ್ಧಮಾನ ಜುವೆಲ್ಲರಿಗೆ ಸೇರಿದ ಚಿನ್ನಾಭರಣ ಎಂದು ತಿಳಿದುಬಂದಿದೆ. ದಾಖಲೆ ಇಲ್ಲದ ಚಿನ್ನ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರಾಜೇಶ್ ಹಾಗೂ ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ಚಿನ್ನವನ್ನು ಜಪ್ತಿ ಮಾಡಲಾಗಿದೆ. ಈ ಚಿನ್ನಕ್ಕೂ ಚುನಾವಣೆಗೂ ಯಾವುದೇ ಸಂಬಂಧ ಇರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ ಎನ್ನಲಾಗಿದೆ. ಈ ಸಂಬಂಧ ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















































error: Content is protected !!
Scroll to Top