ಸಂವಿಧಾನದ ಬಗ್ಗೆ ಕನಿಷ್ಠ ಜ್ಞಾನ ಅಗತ್ಯ : ರವೀಂದ್ರ ಮೊಯ್ಲಿ
ಕಾರ್ಕಳ : ಕೇಂದ್ರದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ನೀಡಿರುವ ಹೇಳಿಕೆ ಅವರ ಭೌತಿಕ ದಿವಾಳಿತನ ತೋರಿಸುತ್ತದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಪಂಚ ಗ್ಯಾರಂಟಿಗಳನ್ನು ಅನುಷ್ಠಾನದಲ್ಲಿ ವಿಫಲವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸಿನ ಸೋಲು ನಿಶ್ಚಿತವಾಗಿದ್ದು, ಆ ಬಳಿಕ ಗ್ಯಾರಂಟಿ ಯೋಜನೆ ಮುಂದುವರಿಸದಿರುವ ನಿರ್ಧಾರ ರಾಜ್ಯ ಸರ್ಕಾರ ಬರಲಿದೆ ಎನ್ನುವ ಮುನ್ಸೂಚನೆ ಉದಯ್ ಕುಮಾರ್ ಶೆಟ್ಟಿಯವರ ಹೇಳಿಕೆಯಿಂದ ಸ್ಪಷ್ಟವಾಗುತ್ತಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಭೀತಿಯಿಂದ ಮತದಾರರನ್ನು ಹೆದರಿಸುವ ತಂತ್ರ ಅನುಸರಿಸುತಿದ್ದು, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಕಾಂಗ್ರೆಸ್‌ನ ಈ ರೀತಿಯ ಹೇಳಿಕೆ ಆಕ್ಷೇಪಾರ್ಹ ಮತ್ತು ಖಂಡನೀಯ.
ಸಂವಿಧಾನ ತಿದ್ದುಪಡಿ ಯಾವ ರೀತಿ ಮಾಡಬಹುದು, ಯಾವಾಗ ಮಾಡಬಹುದು, ಯಾವ ಯಾವ ವಿಷಯಗಳ ಬಗ್ಗೆ ಮಾಡಬಹುದು ಎನ್ನುವ ಕನಿಷ್ಠ ಜ್ಞಾನವಿಲ್ಲದ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುವ ಪೂರ್ವದಲ್ಲಿ ಸಂವಿಧಾನದ ಎಲ್ಲಾ ಪರಿಛೇದಗಳನ್ನು ಅಭ್ಯಸಿಸಲಿ. ಆನಂತರ ಹೇಳಿಕೆ ನೀಡಲಿ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಉದಯ ಕುಮಾರ್ ಶೆಟ್ಟಿಯವರ ವಿರುದ್ಧ ಚುನಾವಣಾಧಿಕಾರಿಯವರಿಗೆ ದೂರು ನೀಡಲಾಗುವುದು ಎಂದು ಕಾರ್ಕಳ ತಾಲೂಕು ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

























