ಸಚಿವ ಪ್ರಿಯಾಂಕ್‌ ಖರ್ಗೆಯನ್ನು ಎನ್‌ಕೌಂಟರ್‌ ಮಾಡುವುದಾಗಿ ಬೆದರಿಕೆ

ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಗ್ರಾಮೀಣಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಪತ್ರ ಬಂದಿದೆ. ಸ್ವತಹ ಪ್ರಿಯಾಂಕ್‌ ಖರ್ಗೆ ಅವರೇ ಈ ಬಗ್ಗೆ ಹೇಳಿಕೊಂಡಿದ್ದಾರೆ. ತಮಗೆ ಜೀವ ಬೆದರಿಕೆ ಬಂದಿರುವ ಬಗ್ಗೆ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಗಲಭೆ ಸೃಷ್ಟಿ ಮಾಡಿ ಬಿಜೆಪಿಯವರು ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ‘ಪತ್ರದಲ್ಲಿ ತನ್ನನ್ನು ಎನ್ಕೌಂಡರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ’ ಎಂದು ಹೇಳಿದ್ದಾರೆ. ಬಿಜೆಪಿಯವರು ಚುನಾವಣೆಯಲ್ಲಿ ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ನನಗೆ ಎರಡು ಜೀವ ಬೆದರಿಕೆ ಪತ್ರಗಳು ಬಂದಿವೆ. ಇನ್ನೊಂದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ. ಈ ಪತ್ರ ಫಿನ್‌ಲ್ಯಾಂಡ್‌ನಿಂದ ಬಂದಿದೆ ಎಂದು ಹೇಳಿ ಸುದ್ದಿಗೋಷ್ಠಿಯಲ್ಲಿ ಆ ಬೆದರಿಕೆ ಪತ್ರವನ್ನೂ ಓದಿದ್ದಾರೆ. ”ಪಂಚಾಮೃತದಿಂದ ಪೂಜೆ ಮಾಡಿದರೂ ನಿನ್ನ ಜಾತಿ ಬೇರೆಯಾಗುವುದಿಲ್ಲ. ಎಂತ ವೇಷಭೂಷಣ ಹಾಕಿದರೂ ನಿನ್ನ ಜಾತಿ ಬದಲಾಗುವುದಿಲ್ಲ. ಮಂತ್ರಿಯಾಗು, ರಾಜನಾಗು, ನಿನ್ನ ಸೊಕ್ಕು ಹೊಲೆಯ-ಮಾದಿಗ ಓಣಿಯಲ್ಲಿ ನಡೆಯುತ್ತೆ” ಎಂದು ಪತ್ರದಲ್ಲಿ ಅಶ್ಲೀಲ ಪದ ಬಳಸಿದ್ದಾರೆ. ಜೊತೆಗೆ ‘ಖಾಕಿಯಾದರೂ, ಯಾರಿಂದಲಾದರೂ ನಿನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ’.
ಬಿಜೆಪಿಗೆ ಚುನಾವಣೆಯಲ್ಲಿ ಸೋಲುವ ಭೀತಿ ಶುರುವಾಗಿದೆ. ಅವರಿಗೆ ರಾಜಕೀಯವಾಗಿ ಎದುರಿಸುವುದು ಗೊತ್ತಿಲ್ಲ. ಹೀಗಾಗಿ ವೈಯಕ್ತಿಕ ದಾಳಿ ಮಾಡುತ್ತಿದ್ದಾರೆ. ‘ನಾನು ಬಳೆ ತೊಟ್ಟುಕೊಂಡಿಲ್ಲ. ಅಖಾಡದಲ್ಲಿ ರೆಡಿಯಿದ್ದೇನೆ’ ಎಂದು ಸಂಸದ ಉಮೆಶ್ ಜಾದವ್ ಅವರೇ ಹೇಳುತ್ತಾರೆ. ಇದಕ್ಕೆ ಉತ್ತರ ನೀಡಬೇಕು ಎಂದರು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದೇನೆ. ವಿಕಾಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ. ಮಾರ್ಚ್ 13ರಂದು ದೂರು ದಾಖಲಿಸಲಾಗಿದೆ ಎಂದು ಅವರು ಹೇಳಿದರು.

















































error: Content is protected !!
Scroll to Top