ಹೃದಯಾಘಾತದಿಂದ ಡೇನಿಯಲ್ ಬಾಲಾಜಿ ನಿಧನ

ಚೆನ್ನೈ : ತಮಿಳು ನಟ ಡೇನಿಯಲ್ ಬಾಲಾಜಿ (48ವ.) ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವೆಟ್ಟೈಯಾಡು ವಿಲಯಾಡುವಿನಲ್ಲಿ ಅಮುಧನ್, ವಡಾ ಚೆನ್ನೈನ ತಂಬಿ ಪಾತ್ರಗಳಿಂದ ಡೇನಿಯಲ್ ಬಾಲಾಜಿ ಹೆಸರುವಾಸಿಯಾಗಿದ್ದಾರೆ, ತಮ್ಮ ವೈವಿಧ್ಯಮಯ ಪ್ರತಿಭೆ, ಬೆಳ್ಳಿತೆರೆ ಮೇಲೆ ಮನಮೋಹಕ ವರ್ಚಸ್ಸಿಗೆ ಹೆಸರುವಾಸಿಯಾಗಿದ್ದ ನಟನಿಗೆ ಕಳೆದ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಚೆನ್ನೈನ ಕೊಟ್ಟಿವಾಕಂನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕ ಚಿತ್ರದಲ್ಲಿ ವಿಲನ್‌ ಆಗಿ ನಟಿಸುವ ಮೂಲಕ ಕನ್ನಡಿಗರ ಮನೆಮಾತಾಗಿದ್ದ ನಟ ಡೇನಿಯಲ್‌ ಬಾಲಾಜಿ ಬಹು ಭಾಷಾನಟನಾಗಿಯೂ ಗುರುತಿಸಿಕೊಂಡಿದ್ದರು.



















































































error: Content is protected !!
Scroll to Top