ಕೆ. ವಿ. ಗೌತಮ್ ಕೋಲಾರದ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು : ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಭಾರೀ ರಾಜಕೀಯ ಹೈಡ್ರಾಮಾಕ್ಕೆ ತೆರೆಬಿದ್ದಿದ್ದು, ಕಾರ್ಪೊರೇಟರ್ ವಿಜಯ್ ಕುಮಾರ್ ಅವರ ಪುತ್ರ ಕೆ. ವಿ. ಗೌತಮ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ ಕುರಿತು ಎಐಸಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ಮೂಲಕ ಸಚಿವ ಕೆ. ಹೆಚ್. ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಕ್ಕೆ ಹಿನ್ನಡೆಯಾಗಿದೆ. ಕೋಲಾರ ಮೀಸಲು ಲೋಕಸಭೆ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ಭಾರೀ ಕಗ್ಗಂಟಾಗಿ ಎಡಗೈ ಮತ್ತು ಬಲಗೈ ಬಣಗಳು ತೀವ್ರ ಹೊಡೆದಾಟ ನಡೆಸಿದ್ದವು.





























































































































error: Content is protected !!
Scroll to Top