ಉದಯ ಕುಮಾರ್ ಶೆಟ್ಟಿ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ

ಕಾರ್ಕಳ : ಕೇಂದ್ರದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂದು ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ನೀಡಿರುವ ಹೇಳಿಕೆಯ ವಿರುದ್ಧ ಕಾರ್ಕಳ ಬಿಜೆಪಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ. ಚುನಾವಣಾ ಸೋಲಿನ ಭೀತಿಯಿಂದ ಕಾಂಗ್ರೆಸ್ ಮತದಾರರನ್ನು ಹೆದರಿಸುವ ತಂತ್ರಕ್ಕೆ ಮುಂದಾಗಿದೆ. ಗ್ಯಾರಂಟಿ ಯೋಜನೆ ಸ್ಥಗಿತವಾಗಲಿದೆ ಎನ್ನುವ ಹೇಳಿಕೆ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವ ಕಾರ್ಯವಾಗುತ್ತಿದೆ. ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇಂತಹ ಆಕ್ಷೇಪಾರ್ಹ ಮತ್ತು ಖಂಡನೀಯ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗೆ ಮನವಿ ಮಾಡಿಕೊಳ್ಳಲಾಗಿದೆ.
ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಪ್ರಧಾನ ಕಾರ್ಯದರ್ಶಿ ಸತೀಶ್ ಬೋಳ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಮಾಧ್ಯಮ ವಕ್ತಾರ ರವೀಂದ್ರ ಮೋಯ್ಲಿ, ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಧನುಷ್ ಆಚಾರ್ಯ, ನಗರಾಧ್ಯಕ್ಷ ನಿರಂಜನ್ ಜೈನ್, ಪ್ರಧಾನ ಕಾರ್ಯದರ್ಶಿ ವಿಘ್ನೇಶ್ ಪ್ರಸಾದ್, ಸುಂದರ್ ಬಿ., ಮುಸ್ತಾಫ ಜಾರ್ಕಳ, ಅಮರ್, ಅಕ್ಷಯ್ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿದ್ದರು.





























































































































error: Content is protected !!
Scroll to Top