ಉಡುಪಿ: ದೈವಕೋಲದ ವೇಳೆ ರಾಜಕೀಯ ಸಭೆ ನಡೆಸಿದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೇಸ್ ದಾಖಲಾಗಿದೆ.
ಶಿರ್ವ ಸಮೀಪ ಜಾರಂದಾಯ ದೈವಸ್ಥಾನದ ಜಾತ್ರೆಗೆ ತೆರಳಿದ್ದ ಜಯಪ್ರಕಾಶ್ ಹೆಗ್ಡೆ, ಸಾರ್ವಜನಿಕರೊಂದಿಗೆ ಚುನಾವಣಾ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಪು ಫ್ಲೈಯಿಂಗ್ ಸ್ಕಾಡ್ಗೆ ಮಾಹಿತಿ ಬಂದಿತ್ತು. ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ದೈವಕೋಲದ ಸ್ಥಳದಲ್ಲಿ ರಾಜಕೀಯ ಸಭೆ : ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೇಸ್









































