ಕಾರ್ಕಳ : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ಮೆಸ್ಕಾಂ ಮತ್ತು ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಎ. 3ರಂದು ಕಾರ್ಕಳ ಬಸ್ ನಿಲ್ದಾಣ ಬಳಿ ಮತದಾನ ಜಾಗೃತಿ ಅಭಿಯಾನ ನಡೆಯಿತು.
ತಹಶೀಲ್ದಾರ್ ನರಸಪ್ಪ ಮಾತನಾಡಿ, ಪ್ರತಿಯೊಬ್ಬ ಮತದಾರನು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದರು.
ಅಭಿಯಾನದಲ್ಲಿ ಮತದಾನದ ಕುರಿತಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಈ ಸಂದರ್ಭ ಪುರಸಭಾ ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ, ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಜೆಸಿಐ ಮತ್ತು ಸ್ವಚ್ಛ ಬ್ರಿಗೇಡ್ ತಂಡದ ಸದಸ್ಯರು ಉಪಸ್ಥಿತರಿದ್ದರು. ಪುರಸಭಾ ಆರೋಗ್ಯ ನಿರೀಕ್ಷಕಿ ಲೈಲಾ ಥೋಮಸ್ ಕಾರ್ಯಕ್ರಮ ನಿರ್ವಹಿಸಿದರು.





































