ಎನ್ಎಂಎಎಂಐಟಿಯ ಉಪನ್ಯಾಸಕರು ಯುಎಸ್ಎಯ ಯೂನಿವರ್ಸಿಟಿಗೆ ಭೇಟಿ

ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 8 ಬೋಧಕರು ನಿಟ್ಟೆ ವಿಶ್ವವಿದ್ಯಾಲಯದ ಇಂಟರ್ನ್ಯಾಷನಲ್ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ (ಐಎಫ್ಡಿಪಿ) ಅಡಿಯಲ್ಲಿ ಅಮೆರಿಕದ ಹ್ಯಾರಿಸ್ಬರ್ಗ್ನ ಪೆನ್ ಸ್ಟೇಟ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದಾರೆ. ಮಾ. 29ರಿಂದು ಭೇಟಿ ನೀಡಿದ್ದು, ಏ. 28ರವರೆಗೆ ಅಲ್ಲಿಯೇ ಇರಲಿದ್ದಾರೆ.

ನಿಯೋಗದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಮತ್ತು ಡೀನ್ (ಪ್ರವೇಶಾತಿ) ಡಾ.ರಾಜೇಶ್ ಶೆಟ್ಟಿ, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗ ಕಂಪ್ಯೂಟರ್‌ ವಿಭಾಗದ ಮುಖ್ಯಸ್ಥ ಡಾ. ಸೂರ್ಯನಾರಾಯಣ ಕೆ., ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ರಾಧಾಕೃಷ್ಣ, ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥೆ ಡಾ. ಅಶ್ವಿನಿ ಬಿ., ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸುಕೇಶ್ ರಾವ್ ಎಂ, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಡಾ. ರಘುನಂದನ್ ಕೆ.ಆರ್, ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಜೇಸನ್ ಎಲ್ರಾಯ್ ಮಾರ್ಟಿಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಗ್ರೇಡ್-೩ ಡಾ. ಶಿವಕುಮಾರ್ ಬಿ.ಆರ್. ಇದ್ದಾರೆ.

ಅಮೇರಿಕಾದ ವಿಶ್ವವಿದ್ಯಾಲಯದಲ್ಲಿ ಎಂಜಿನಿಯರಿಂಗ್ ಶಿಕ್ಷಣದಲ್ಲಿ ಉತ್ತಮ ಅಭ್ಯಾಸಗಳನ್ನು ಗುರುತಿಸಿ ಅಲ್ಲಿನ ಕೋರ್ಸ್ ವಿನ್ಯಾಸ, ಬೋಧನಾ ತಂತ್ರಗಳು ಮತ್ತು ಮೌಲ್ಯಮಾಪನ ವಿಧಾನಗಳ ಸಮಗ್ರ ಚಿತ್ರಣ ಪಡೆಯುವುದು, ಎಂಜಿನಿಯರಿಂಗ್ ಕೋರ್ಸ್ ನಲ್ಲಿ ಉದ್ಯಮ-ಸಂಬಂಧಿತ ಪಠ್ಯಕ್ರಮವನ್ನು ಅಭಿವೃದ್ಧಿಪಡಿಸಲು ಪಿಎಸ್ ಯುನಲ್ಲಿ ಬಳಸುವ ತಂತ್ರಗಳನ್ನು ಗುರುತಿಸುವುದು, ಪಿಎಸ್ ಯುನೊಂದಿಗೆ 2 + 1 + 1 ಟ್ವಿನಿಂಗ್ ಮತ್ತು 2 + 2 ಡ್ಯುಯಲ್ ಡಿಗ್ರಿ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸಲು ಮತ್ತು ಕಾರ್ಯಗತಗೊಳಿಸಲು ಕೊಡುಗೆ ನೀಡಿ ಪರಸ್ಪರ ಪ್ರಯೋಜನಕಾರಿಯಾದ ಸುಸ್ಥಿರ ಮತ್ತು ನಿರಂತರ ಸಹಯೋಗವನ್ನು ಅಭಿವೃದ್ಧಿಪಡಿಸಲು ಈ ಯೋಜನೆ ಕೈಗೊಳ್ಳಲಾಗಿದೆ ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.









































































































error: Content is protected !!
Scroll to Top