ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ನಾಳೆ (ಏ.10) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆಯ ನಂತರ https://karresults.nic.in ವೀಕ್ಷಿಸಬಹುದು. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹಿನ್ನೆಲೆ ಬೆಳಗ್ಗೆ 10ಕ್ಕೆ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ ಫಲಿತಾಂಶ ಪ್ರಕಟವಾಗಲಿದೆ.

ಮಾ.1-22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಈ ಬಾರಿ 6.98 ಲಕ್ಷವಿದ್ಯಾರ್ಥಿಗಳು ಪಿಯು ಪರೀಕ್ಷೆ ಬರೆದಿದ್ದಾರೆ. ಈ ವರುಷರಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮೊದಲೇ ಮೂರು ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಬೇಕಿದೆ.







































error: Content is protected !!
Scroll to Top