ನಿಟ್ಟೆ ತಾಂತ್ರಿಕ ಕಾಲೇಜಿಗೆ ಬಿ.ಸಿ. ಆಳ್ವ ಸ್ಮಾರಕ ಚಾಂಪಿಯನ್ ಶಿಪ್ ಟ್ರೋಫಿ

ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಬಿ.ಸಿ. ಆಳ್ವ ಸ್ಮಾರಕ ಟ್ರೋಫಿ ಟಿ-20 ಕ್ರಿಕೆಟ್ ಪಂದ್ಯಾವಳಿ ಇತ್ತೀಚೆಗೆ ನಡೆಯಿತು. ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 16 ಕಾಲೇಜಿನ ತಂಡಗಳು ಭಾಗವಹಿಸಿದ್ದವು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ಪಂದ್ಯಾವಳಿಗೆ ಚಾಲನೆ ನೀಡಿದರು. ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಪ್ರೊ. ಎ. ಯೋಗೀಶ್ ಹೆಗ್ಡೆ ಮತ್ತು ಕ್ರೀಡಾ ಆಡಳಿತಾಧಿಕಾರಿ ಶ್ಯಾಮ್ ಸುಂದರ್ ಎಂ. ಈ ಸಂದರ್ಭ ಉಪಸ್ಥಿತರಿದ್ದರು.

ಸೆಮಿಫೈನಲ್‌ನಲ್ಲಿ ಮಂಗಳೂರಿನ ಯೆನೆಪೋಯ ಮೆಡಿಕಲ್ ಕಾಲೇಜು ತಂಡ ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜು ತಂಡದ ವಿರುದ್ಧ 8 ರನ್‌ಗಳಿಂದ ಹಾಗೂ ನಿಟ್ಟೆಯ ತಾಂತ್ರಿಕ ಕಾಲೇಜಿನ ತಂಡವು ಮಂಗಳೂರಿನ ಯೆನೆಪೋಯ ಅಲೈಡ್ ಹೆಲ್ತ್ ಸೈನ್ಸಸ್ ವಿರುದ್ಧ 41 ರನ್‌ಗಳಿಂದ ಜಯ ಸಾಧಿಸಿತು.

ಫೈನಲ್‌ನಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ತಂಡವು ಮಂಗಳೂರಿನ ಯೆನೆಪೋಯ ವೈದ್ಯಕೀಯ ಕಾಲೇಜು ವಿರುದ್ಧ 3 ವಿಕೆಟ್‌ಗಳಿಂದ ಗೆದ್ದು ಪಂದ್ಯಾವಳಿಯ ಚಾಂಪಿಯನ್‌ಶಿಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ಮತ್ತು ನಿರ್ದೇಶಕ ಪ್ರೊ. ಎ. ಯೋಗೀಶ್ ಹೆಗ್ಡೆ ವಿಜೇತರು ಮತ್ತು ಆಟಗಾರರಿಗೆ ಟ್ರೋಫಿಗಳನ್ನು ವಿತರಿಸಿದರು.





























































































































error: Content is protected !!
Scroll to Top