ಬಸ್‌ ಕಂದಕಕ್ಕೆ ಉರುಳಿ 12 ಸಾವು

ರಾಯ್‌ಪುರ: ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 8:30 ಕ್ಕೆ ಈ ಘಟನೆ ನಡೆದಿದ್ದು, ಕಾರ್ಮಿಕರು ತುಂಬಿದ್ದ ಬಸ್ ಹಳ್ಳಕ್ಕೆ ಬಿದ್ದಿದ್ದರಿಂದ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ದುರ್ಗ್‌ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ ಮಾಹಿತಿ ನೀಡಿದ್ದಾರೆ.
ಗಾಯಗೊಂಡವರಲ್ಲಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ)ಗೆ ಕಳುಹಿಸಲಾಗಿದೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ. ನಾವು ಅವರಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಬಸ್ಸಿನೊಳಗೆ ಇನ್ನೂ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದ ಕುರಿತು ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ, ಖಾಸಗಿ ಸಂಸ್ಥೆಯೊಂದರ ಉದ್ಯೋಗಿಗಳು ಪ್ರಯಾಣಿಸುತ್ತಿದ್ದ ಬಸ್ ದುರ್ಗ್‌ನ ಕುಮ್ಹಾರಿ ಬಳಿ ಅಪಘಾತ ಒಳಗಾಗಿರುವ ಸುದ್ದಿ ಕೇಳಿ ದುಃಖಿತನಾಗಿದ್ದೇನೆ ಎಂದಿದ್ದಾರೆ.































































































































error: Content is protected !!
Scroll to Top