ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಕಾರ್ಕಳ : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾ. 1ರಿಂದ ಮಾ. 22ರವರೆಗೆ ನಡೆದಿದ್ದು, ಬುಧವಾರ ಫಲಿತಾಂಶ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ, ಶೇ. 81.15ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ (97.37%) ಪ್ರಥಮ ಮತ್ತು ಉಡುಪಿ ಜಿಲ್ಲೆ (96.80%) ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ. 94.89ರಷ್ಟು ಫಲಿತಾಂಶದೊಂದಿಗೆ ವಿಜಯ ಪುರ ಜಿಲ್ಲೆ ತೃತೀಯ ಸ್ಥಾನ ಲಭಿಸಿದೆ.  ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಟಾಪರ್ಸ್‌
ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್​ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ.

2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. 





























































































































error: Content is protected !!
Scroll to Top