ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕಾರ್ಕಳ : ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಾಗೇಂದ್ರ ಕುಡ್ವ 589 ಅಂಕ ಪಡೆದು ರಾಜ್ಯಕ್ಕೆ 10ನೇ ಸ್ಥಾನವನ್ನು, ನಾಗೇಶ್ ಪ್ರಭು 11ನೇ ಸ್ಥಾನವನ್ನು, ಪವಿತ್ರ ಅಶೋಕ್ ಕಾಮತ್ 13ನೇ ಸ್ಥಾನ, ಪ್ರೀಯಾ ಪೈ ಮತ್ತು ಸಿಂಧು 14ನೇ ಸ್ಥಾನವನ್ನು, ಅನಿಕೇತ್ ನಿಶಿಕಾಂತ್ 15ನೇ ಸ್ಥಾನವನ್ನು ಮತ್ತು ವಾಣಿಜ್ಯ ವಿಭಾಗದ ಕೃಪಾ ನಿಧೀಶ್ ತೆಂಡೂಲ್ಕರ್ ರಾಜ್ಯಕ್ಕೆ 17ನೇ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಪರೀಕ್ಷೆಗೆ ಹಾಜರಾದ ಒಟ್ಟು 311 ವಿದ್ಯಾರ್ಥಿಗಳಲ್ಲಿ 113 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 178 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಮತ್ತು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.































































































































error: Content is protected !!
Scroll to Top