ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 99.05 ಫಲಿತಾಂಶ

ಕಾರ್ಕಳ : ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜು 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 99.05 ಫಲಿತಾಂಶ ದಾಖಲಿಸಿಕೊಂಡಿದೆ.
ಪರೀಕ್ಷೆ ಹಾಜರಾಗಿದ್ದ 105 ವಿದ್ಯಾರ್ಥಿಗಳಲ್ಲಿ 104 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 35 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು, ವಾಣಿಜ್ಯ ವಿಭಾಗದ ವೀರೇಂದ್ರ 581ಅಂಕ, ಕಲಾ ವಿಭಾಗದ ಸೌಮ್ಯ ಆಚಾರ್ಯ 580 ಅಂಕ ಹಾಗೂ ವಾಣಿಜ್ಯ ವಿಭಾಗದ ಸಮೀಕ್ಷಾ 579 ಅಂಕ ಗಳಿಸಿ ಕ್ರಮವಾಗಿ ಕಾಲೇಜಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಿಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯವರು ಅಭಿನಂದಿಸಿದ್ದಾರೆ.































































































































error: Content is protected !!
Scroll to Top