ನಲ್ಲೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಗೇರು ಬೀಜ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏ. 10ರಂದು ನಲ್ಲೂರು ಗ್ರಾಮದಲ್ಲಿ ಸಂಭವಿಸಿದೆ. ಪ್ರವೀಣ್ ಶಂಕರ್ (54) ಆತ್ಮಹತ್ಯೆಗೆ ಶರಣಾದವರು. ಇವರು ಮುಡಾರಿನಲ್ಲಿರುವ ಶ್ರೀ ದೇವಿ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ರೈಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಇತ್ತೀಚೆಗೆ ತಾಯಿ ಭುವನೇಶ್ವರಿ ಮತ್ತ ಪತ್ನಿ ಈಶ್ವರಿಯವರ ಬಳಿ ನನಗೆ ಗೇರು ಬೀಜ ಫ್ಯಾಕ್ಟರಿಯಲ್ಲಿ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದರು. ಇದೇ ವಿಚಾರವಾಗಿ ಮನನೊಂದು ತಮ್ಮ ಮನೆಯ ಮಹಡಿ ಮೇಲಿರುವ ಹಾಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.





























































































































error: Content is protected !!
Scroll to Top