ಎಸ್‌ವಿಟಿ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ

ಕಾರ್ಕಳ : ಎಸ್‌ವಿಟಿ ವನಿತಾ ಪದವಿ ಪೂರ್ವ ಕಾಲೇಜು 2023-24 ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ. 100 ಹಾಗೂ ಕಲಾ ವಿಭಾಗದಲ್ಲಿ ಶೇ. 100 ವಿದ್ಯಾರ್ಥಿನಿಯರು ತೇರ್ಗಡೆಗೊಳ್ಳುವುದರೊಂದಿಗೆ ಶೇ. 100 ಫಲಿತಾಂಶ ದಾಖಲಿಸಿಕೊಂಡಿದೆ. ಪರೀಕ್ಷೆಗೆ ಹಾಜರಾದ 76 ವಿದ್ಯಾರ್ಥಿನಿಯರಲ್ಲಿ 20 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 48 ಮಂದಿ ಪ್ರಥಮ ದರ್ಜೆ ಹಾಗೂ 8 ಮಂದಿ ವಿದ್ಯಾರ್ಥಿನಿಯರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳಿಗೆ ವೆಂಕಟರಮಣ ಎಜ್ಯುಕೇಶನ್ ಟ್ರಸ್ಟ್‌‌, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.





























































































































error: Content is protected !!
Scroll to Top