ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನ ಹತ್ಯೆ

ಶ್ರೀನಗರ : ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾಕ ಸತ್ತಿದ್ದಾನೆ.
ಪುಲ್ವಾಮಾ ಜಿಲ್ಲೆಯ ಅರ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಭದ್ರತಾ ಪಡೆಗಳ ಪ್ರತಿ ದಾಳಿಗೆ ಓರ್ವ ಉಗ್ರರ ಮೃತಪಟ್ಟಿರುವುದಾಗಿ ಉನ್ನತ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಭಯೋತ್ಪಾದಕ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಅಲ್ಲಿ ಇನ್ನೂ ಕಾರ್ಯಾಚರಣೆ ನಡೆಯುತ್ತಿದ್ದು, ಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಇವರು ಲೋಕಸಭೆ ಚುನಾವಣೆಯನ್ನು ಕೆಡಿಸಲು ಗಡಿಯಾಚೆಗಿನಿಂದ ಬಂದಿರುವ ಭಯೋತ್ಪಾದಕರು ಎನ್ನಲಾಗಿದೆ.





























































































































error: Content is protected !!
Scroll to Top