ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯುವ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಇಂದು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಇಂದು ಬೆಳಗ್ಗೆ 11ಗಂಟೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ರಜಾದಿನ ಬಿಟ್ಟು ಉಳಿದ ದಿನ ಉಮೇದುವಾರಿಕೆ ಸಲ್ಲಿಸಬಹುದು. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಕ್ಷಿಣ ಕರ್ನಾಟಕದ ಮೈಸೂರು ಭಾಗದ ಕ್ಷೇತ್ರಗಳು ಸೇರಿದಂತೆ ಒಟ್ಟು 14 ಕ್ಷೇತ್ರಗಳಿಗೆ ಇದೇ ಏಪ್ರಿಲ್ 26 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನೂ ಎರಡನೇ ಹಂತದಲ್ಲಿ ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಕ್ಷೇತ್ರಗಳು ಸೇರಿ ಒಟ್ಟು 14 ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ಜರುಗಲಿದೆ.
ಈ ಹಿನ್ನೆಲೆಯಲ್ಲಿ ಇಂದಿನಿಂದ ಏಪ್ರಿಲ್ 19ರವರೆಗೆ ಉಮೇದುವಾರಿಕೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಏಪ್ರಿಲ್ 20ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.
ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ, ಚಿಕ್ಕೋಡಿ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಕೊಪ್ಪಳ, ಬಳ್ಳಾರಿ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್ ಹಾಗೂ ಶಿವಮೊಗ್ಗ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

























































































































error: Content is protected !!
Scroll to Top