ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ – ಇಬ್ಬರ ಬಂಧನ

ಬೆಂಗಳೂರು : ಬೆಂಗಳೂರಿನ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ.
ಮಾ. 1ರಂದು ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ ಸಂಚಿನಲ್ಲಿ ಶಿವಮೊಗ್ಗ ಐಸಿಸ್‌ ಮಾಡ್ಯೂಲ್‌ ಶಂಕಿತ ಉಗ್ರರಾದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವೀರ್ ಶಾಜಿಬ್‌ನನ್ನು ಎನ್‌ಐಎ ವಶಕ್ಕೆ ಪಡೆದುಕೊಂಡಿದೆ.

ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಬಂಧಿಸಲಾಗಿದೆ ಎಂದು ಎನ್ಎಐ ಮೂಲಗಳು ತಿಳಿಸಿವೆ. ‘ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ.

ಐಇಡಿ ತಂದಿದ್ದ ಮುಸಾವೀರ್ ಹಾಗೂ ಸ್ಫೋಟಕ್ಕೆ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು ಎಂದು ಹೇಳಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಇವರಿಗೆ ಸಹಾಯ ಮಾಡಿದ್ದ ಮುಜಾಮೀಲ್ ಷರೀಫ್ ಎಂಬಾತನನ್ನು ಕೂಡ ಬಂಧಿಸಲಾಗಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.











































































error: Content is protected !!
Scroll to Top