ಸ್ಫೋಟ ಆರೋಪಿಗಳನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ನಗರಕ್ಕೆ ಕರೆತಂದಿದ್ದು, ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸೆರೆಯಾಗಿರುವ ಶಂಕಿತ ಉಗ್ರರನ್ನು ನಗರಕ್ಕೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ ಅಬ್ದುಲ್‌ ಮತೀನ್‌ ತಾಹ, ಮುಸಾವಿರ್‌ ಹುಸೇನ್‌ನನ್ನು ಎನ್‌ಐಎ ಪೊಲೀಸರು ಕರೆತಂದರು. ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.

ಬಾಂಬ್ ಬ್ಲಾಸ್ಟ್ ಕೇಸಲ್ಲಿ ಬಂಧಿತರಾಗಿರುವ ಮುಜಾಮಿಲ್ ಶರೀಫ್‌, ಮಾಜ್ ಮಾನಿರ್ ಹೇಳಿಕೆ ಅಧರಿಸಿ ವಿಚಾರಣೆ ನಡೆಸಲಾಗುವುದು. ರಾಮೇಶ್ವರಂ ಬಾಂಬ್ ಸ್ಫೋಟ ಕೇಸಲ್ಲಿ ಯಾರ‍್ಯಾರ ಪಾತ್ರ ಏನಿತ್ತು? ಈ ಕೃತ್ಯದ ಹಿಂದೆ ಬೇರೆ ಯಾರೆಲ್ಲಾ ಇದ್ದಾರೆ? ರಾಮೇಶ್ವರಂ ಕೆಫೆಯಲ್ಲೇ ಬಾಂಬ್ ಬ್ಲಾಸ್ಟ್ ಮಾಡಿದ ಉದ್ದೇಶವೇನು? ಬೇರೆ ಎಲ್ಲೆಲ್ಲಿ ವಿಧ್ವಂಸಕ ಕೃತ್ಯವೆಸಗಲು ಪ್ಲಾನ್ ಮಾಡಲಾಗಿತ್ತು ಎಂಬ ಅಂಶಗಳು ಸೇರಿದಂತೆ ನಾನಾ ದೃಷ್ಟಿಕೋನದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.
ಎನ್‌ಐಎ ವಿಶೇಷ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ. ಭದ್ರತಾ ದೃಷ್ಟಿಯಿಂದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಿರುವ ಅಧಿಕಾರಿಗಳು, 14 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲು ತಯಾರಿ ನಡೆಸಿದ್ದಾರೆ.































































































































error: Content is protected !!
Scroll to Top