ಕಾರ್ಕಳ : ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ (ಇಂಟಕ್) ಉಡುಪಿ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ಬೆಳ್ಮಣ್‌ನ ವಾಲ್ಟರ್ ಟೋನಿ ನೊರೊನ್ಹ ಅವರು ಆಯ್ಕೆಯಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ಅಧ್ಯಕ್ಷ ಲಕ್ಷ್ಮಿ ವೇಂಕಟೇಶ್ ಅವರ ಆದೇಶದಂತೆ, ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು ಅವರ ಅನುಮೋದನೆಯೊಂದಿಗೆ ವಾಲ್ಟರ್ ಟೋನಿ ನೊರೊನ್ಹಾ ಅವರನ್ನು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಇಂಟಕ್ ಜಿಲ್ಲಾ ಅಧ್ಯಕ್ಷ ಕೆ. ಎಸ್. ಕಿರಣ್ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಾಲ್ಟರ್ ಟೋನಿ ನೊರೊನ್ಹ ಅವರು ಈ ಮೊದಲು ಬೆಳ್ಮಣ್ ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ಪಕ್ಷದ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.
ಇಂಟಕ್ ಜಿಲ್ಲಾ ಕಾರ್ಯದರ್ಶಿಯಾಗಿ ವಾಲ್ಟರ್ ಟೋನಿ ನೊರೊನ್ಹ






























































