ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂಡಬೆಟ್ಟು ಮಾಳ ಇಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಮುಖ್ಯೋಪಾಧ್ಯಾಯಿನಿ ಪ್ರಭಾವತಿ, ಶಿಕ್ಷಕರು, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ವಿಭಾಗದ ಎಲ್ಲ ಶಿಕ್ಷಕರು ಹಾಜರಿದ್ದರು.
ಮಾಳ ಶ್ರೀಗುರುಕುಲ ಅನುದಾನಿತ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ
ಮಾಳ : ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಇವರ ಜನ್ಮದಿನವನ್ನು ಆಚರಿಸಲಾಯಿತು. ಶ್ರೀ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗಜಾನನ ಮರಾಠೆ ಇವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ ಮುಖ್ಯ ಶಿಕ್ಷಕಿ ಪೂರ್ಣಿಮಾ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ನಡೆದು ಬಂದ ದಾರಿ ಸಂವಿಧಾನ ರಚನೆ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಸಂವಿಧಾನ ಪೀಠಿಕೆಯನ್ನು ಈ ಸಂದರ್ಭ ಓದಿದರು. ಶಿಕ್ಷಕರೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಗುಪ್ಪೆ

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಗುಪ್ಪೆ ಶಾಲೆಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ 133ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯ ಮನೋಹರ ಅವರು ಅಂಬೇಂಡ್ಕರ್ ಅವರ ಬಗ್ಗೆ ಮಾತನಾಡಿದರು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವಿಜಯ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್ ಕುಮಾರ್, ಸಂಘದ ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕಿಯರು ವನಿತಾ ಹೆಗಡೆ, ಶಾಲಿನಿ. ಯು. ಜಿ. ಸುನಂದಾ, ಅಶ್ವಿನಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.



















