ಇರಾನ್ ಸೀಜ್ ಮಾಡಿದ ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿ : ತಾಯ್ನಾಡಿಗೆ ಮರಳಿದ ಕೇರಳದ ಏಕೈಕ ಮಹಿಳೆ

ನವದೆಹಲಿ : ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಹಲವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇರಾನ್ ಸತತವಾಗಿ ದಾಳಿ ನಡೆಸುತ್ತಿದೆ. ಈ ದಾಳಿಗೂ ಮೊದಲು ಇಸ್ರೇಲ್ ಮೂಲದ ಹಡಗಿನ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿತ್ತು. ಈ ಹಡಗಿನಲ್ಲಿ 17 ಭಾರತೀಯ ಸಿಬ್ಬಂದಿಗಳು ಸಿಲುಕಿದ್ದರು.

ಇರಾನ್‌ ಸೇನೆ ವಶಪಡಿಸಿಕೊಂಡಿದ್ದ ಇಸ್ರೇಲ್‌ ಜೊತೆ ನಂಟಿರುವ ನೌಕೆ ‘ಎಂಎಸ್‌ಸಿ ಏರೀಸ್‌’ನಲ್ಲಿದ್ದ 17 ಜನ ಭಾರತೀಯರ ಪೈಕಿ ಏಕೈಕ ಮಹಿಳಾ ಸಿಬ್ಬಂದಿಯಾದ ಆ್ಯನ್‌ ಟೆಸ್ಸಾ ಜೋಸೆಫ್‌ ಅವರನ್ನು ಬಿಡುಗಡೆ ಮಾಡಲಾಗಿದ್ದು, ಅವರು ತಾಯ್ನಾಡಿಗೆ ಗುರುವಾರ ವಾಪಸಾಗಿದ್ದಾರೆ.

ಇರಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ನಡೆಸಿದ ಸತತ ಪ್ರಯತ್ನಗಳಿಗೆ ಸಿಕ್ಕ ಜಯವಾಗಿದೆ. ಕೇರಳದ ತ್ರಿಶ್ಶೂರಿನವರಾದ ಜೋಸೆಫ್‌ ಅವರು ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ ಬಂದಿಳಿದರು. ಅವರನ್ನು ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿ ಅಧಿಕಾರಿಯೊಬ್ಬರು ಬರಮಾಡಿಕೊಂಡರು.























































































































































error: Content is protected !!
Scroll to Top