ನೇಹಾ ಹತ್ಯೆ ಪ್ರಕರಣ : ಪರಮೇಶ್ವರ್ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು : ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ಕೊಲೆಗೆ ಪ್ರೀತಿ ಕಾರಣ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ.
ಸದಾಶಿವನಗರದ ಗೃಹ ಸಚಿವರ ಸರಕಾರಿ ನಿವಾಸದ ಮುಂದೆ ಎಬಿವಿಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳು, ನ್ಯಾಯ ಕೊಡುವಂತೆ ಆಗ್ರಹಿಸಿದರು. ಕೆಲ ಹೊತ್ತು ಮನೆ ಮುಂದೆ ಕೂತು ಪ್ರತಿಭಟನೆ ನಡೆಸಿ, ಸರಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ನಂತರ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಎಬಿವಿಪಿ ಕಾರ್ಯಕರ್ತರ ಮುತ್ತಿಗೆ ಯತ್ನ ಹಿನ್ನೆಲೆ ಪರಮೇಶ್ವರ್ ನಿವಾಸದ ಸುತ್ತ ಬಿಗಿಭದ್ರತೆ ಏರ್ಪಡಿಸಲಾಗಿತ್ತು. 100ಕ್ಕೂ ಹೆಚ್ಚು ಪೊಲೀಸರಿಂದ ಗೃಹ ಸಚಿವರ ಮನೆ ಬಳಿ ಎರಡು ಕಡೆ ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ತ್ ಮಾಡಿದ್ದರು. ಮುತ್ತಿಗೆ ವೇಳೆ ಗೃಹ ಸಚಿವ ಪರಮೇಶ್ವರ್ ನಿವಾಸದಲ್ಲೇ ಇದ್ದರು ಎಂದು ತಿಳಿದುಬದಿದೆ.







































































error: Content is protected !!
Scroll to Top