ಇಂದು ಮತ್ತೊಮ್ಮೆ ರಾಜ್ಯಕ್ಕೆ ಮೋದಿ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಇಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿದ್ದು, ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಸಮಾವೇಶ ಮತ್ತು ರೋಡ್‌ ಶೋ ನಡೆಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್​ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಬಿಗಿ ಪೊಲೀಸ್​ ಬಂದೂಬಸ್ತ್ ಮಾಡಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ಹಿನ್ನಲೆ ಅರಮನೆ ಸುತ್ತಲೂ ಹದ್ದಿನ ಕಣ್ಣು ಇಡಲಾಗಿದ್ದು, ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಜೊತೆಗೆ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದ್ದು, ಬಂದೋಬಸ್ತ್​​ಗಾಗಿ ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್​ ಕಾನ್ಸ್​ಟೇಬಲ್​, ಪೊಲೀಸ್​ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ ಬಾಬು ಪರ ಚುನಾವಣಾ ಪ್ರಚಾರ ನಡೆಸಲು ನರೇಂದ್ರ ಮೋದಿ ಚಿಕ್ಕಬಳ್ಳಾಪುರ ಆಗಮಿಸಲಿದ್ದಾರೆ. ಮೋದಿಯವರ ಕಾರ್ಯಕ್ರಮದ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸುಮಾರು 50 ಎಕರೆ ಜಮೀನಿನಲ್ಲಿ ವಿಶಾಲವಾದ ಪೆಂಡಲ್ ಹಾಗೂ ಹೆಲಿಪ್ಯಾಡ್‍ಗಳ ನಿರ್ಮಾಣ ಮಾಡಲಾಗಿದೆ.
ಮೋದಿ ಮೊದಲು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ವೇದಿಕೆಯ ಹಿಂಭಾಗ ನಿರ್ಮಾಣ ಮಾಡಿರುವ ಹೆಲಿಪ್ಯಾಡ್‍ನಲ್ಲಿ ಲ್ಯಾಂಡ್ ಆಗಿ ಚಿಕ್ಕಾಬಳ್ಳಾಪುರ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿನ ಅರಮನೆ ಮೈದಾನಕ್ಕೆ ತೆರಳಲಿದ್ದಾರೆ. ಮೋದಿಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಬಿ.ಎಸ್.ವೈ, ಬಿ.ವೈ ವಿಜೇಯಂದ್ರ ಹಾಗೂ ಆರ್.ಅಶೋಕ್ ಸಾಥ್ ನೀಡಲಿದ್ದಾರೆ.





































































































































error: Content is protected !!
Scroll to Top