ಬಿಜೆಪಿಗೆ ಕೆ.ಪಿ.ನಂಜುಂಡಿ ಗುಡ್‌ಬೈ

ಬೆಂಗಳೂರು: ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್‌ ಮತ್ತೊಂದು ಆಪರೇಷನ್‌ ಹಸ್ತ ಮಾಡಿದ್ದು, ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಕೆ. ಪಿ. ನಂಜುಂಡಿ ಅವರಿಂದ ರಾಜೀನಾಮೆ ಕೊಡಿಸಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ನಿನ್ನೆ ನಂಜುಂಡಿ ಜತೆ ಸುದೀರ್ಘ ಮಾತುಕತೆ ನಡೆಸಿದ್ದರು. ಇದಾದ ಬೆನ್ನಿಗೆ ನಂಜುಂಡಿ ಇಂದು ತನ್ನ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬುಧವಾರ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ನಾಳೆ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ​ ಸೇರುತ್ತಿದ್ದೇನೆ. ನಿರ್ಲಕ್ಷ್ಯಕ್ಕೊಳಗಾದ‌ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದು ಆರೋಪಿಸಿದರು.
ರಾಜೀನಾಮೆ ಕೊಡುವಂತೆ ಎರಡು ವರ್ಷದಿಂದ ನಮ್ಮ ಸಮಾಜದ ಒತ್ತಡವಿತ್ತು. ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ, ನಮ್ಮ ಹೋರಾಟಕ್ಕೆ ಬೆಲೆ ಇಲ್ಲವಾಗಿದೆ. ಹೀಗಾಗಿ ನಾನು ಎಂಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದೇನೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ ಎಂದು ಅವರು ಹೇಳಿದರು.























































































































































error: Content is protected !!
Scroll to Top