ರಾಜ್ಯದಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ಚುನಾವಣೆ ಪ್ರಚಾರ

ಹೊಸದಿಲ್ಲಿ: ಕರ್ನಾಟಕದ ಮೊದಲ ಹಂತದ ಚುನಾವಣೆಗೆ ಬಿರುಗಾಳಿಯೋಪಾದಿಯಲ್ಲಿ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿಯವರು ಇದೀಗ ಮೇ 7ರಂದು ನಡೆಯುವ ಎರಡನೇ ಹಂತದ ಚುನಾವಣೆಗಾಗಿ ಮತ್ತೊಮ್ಮೆ ರಾಜ್ಯಕ್ಕೆ ಬರಲಿದ್ದಾರೆ. ಏಪ್ರಿಲ್ 28 ಹಾಗೂ 29ರಂದು ಆರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ಕ್ಯಾಂಪೇನ್ ಮಾಡಲಿದ್ದಾರೆ. ಎರಡು ದಿನ 12 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿ ಆರು ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ.
ಏಪ್ರಿಲ್ 28ರಂದು ದಾವಣಗೆರೆ, ಕಾರವಾರ, ಬೆಳಗಾವಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವಿಟಿಯು ಗೆಸ್ಟ್ ಹೌಸ್, ಐಟಿಸಿ ವೆಲ್‌ಕಮ್, ಮೇರಿಯಟ್, ಯುಕೆ-27 ಯಾವುದಾದೃೂ ಒಂದು ಹೊಟೇಲ್​ನಲ್ಲಿ ತಂಗಲಿದ್ದಾರೆ. ಎಸ್‌ಪಿಜಿ ಪರಿಶೀಲನೆ ಬಳಿಕ ಹೊಟೇಲ್​ ನಿಗದಿಯಾಗಲಿದೆ. ಏಪ್ರಿಲ್ 29ರಂದು ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಹೆಚ್ಚು ಪ್ರಾಬಲ್ಯ ಹೊಂದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿ ಗೆಲವು ಸಾಧಿಸಿತ್ತು. ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಭಾಗದಲ್ಲಿ ಬಿಜೆಪಿಯನ್ನು ಇನ್ನಷ್ಟು ಸುಭದ್ರಗೊಳಿಸಲು ಪ್ರಧಾನಿ ಮೋದಿ ರಣಕಹಳೆ ಊದಲಿದ್ದಾರೆ.
ದಾವಣಗೆರೆಯಿಂದ ಆರಂಭವಾಗುವ ಮೋದಿ ದಂಡಯಾತ್ರೆ ಬೆಳಗಾವಿ, ಕಲಬುರ್ಗಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ನಡೆಯಲಿದೆ. ಎರಡು ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಿದ್ದಾರೆ.























































































































































error: Content is protected !!
Scroll to Top