ಇಂದು ಬಹಿರಂಗ ಪ್ರಚಾರ ಅಂತ್ಯ

ಬೆಂಗಳೂರು : ದೇಶದಲ್ಲಿ ಎರಡನೇ ಹಂತದ ಮತ್ತು ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಬಹಿರಂಗ ಪ್ರಚಾರದ ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಮತದಾರರ ಮನಗೆಲ್ಲಲು ಬಿರುಸಿನಿಂದ ಓಡಾಡಲಿದ್ದಾರೆ. ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗುತ್ತದೆ. ಅನಂತರ ಕ್ಷೇತ್ರದಲ್ಲಿ ಮತದಾರರಲ್ಲದವರು ಇರಬಾರದು.
ಮತದಾನಕ್ಕಾಗಿ ಜಿಲ್ಲಾಡಳಿತ ಭದ್ರತೆಯೂ ಸೇರಿದಂತೆ ಸರ್ವ ಸಿದ್ಧತೆಯನ್ನು ಮಾಡಿಕೊಂಡಿದೆ. ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಮತದಾನ ಪ್ರಮಾಣ ಹೆಚ್ಚಳಕ್ಕೆ ಈಗಾಗಲೇ ಸಾಕಷ್ಟು ಶ್ರಮ ಪಡಲಾಗಿದೆ.
ಲೋಕಸಭೆ ಚುನಾವಣೆಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಮೊದಲ ಹಂತದ ವೋಟಿಂಗ್ ಏಪ್ರಿಲ್ 19ರಂದು ನಡೆದಿದೆ. ಏಪ್ರಿಲ್ 26ರಂದು ಎರಡನೇ ಹಂತದಲ್ಲಿ ಒಟ್ಟು 13 ರಾಜ್ಯಗಳ 89 ಸ್ಥಾನಗಳಿಗೆ ಮತದಾನ ನಡೆಯಲಿದೆ. ಚುನಾವಣೆ ನಡೆಯಲಿರುವ 13 ರಾಜ್ಯಗಳಲ್ಲಿ ಕರ್ನಾಟಕದ ಜತೆಗೆ ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ರಾಜಸ್ಥಾನ, ತ್ರಿಪುರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿವೆ.
ಅಸ್ಸಾಂನಲ್ಲಿ 5, ಬಿಹಾರದಲ್ಲಿ 5, ಛತ್ತೀಸ್‌ಗಢದಲ್ಲಿ 3, ಕೇರಳದಲ್ಲಿ 20, ಮಧ್ಯಪ್ರದೇಶದಲ್ಲಿ 7, ಮಹಾರಾಷ್ಟ್ರದಲ್ಲಿ 8, ಮಣಿಪುರದಲ್ಲಿ 1, ರಾಜಸ್ಥಾನದಲ್ಲಿ 13, ತ್ರಿಪುರಾ ಹಾಗೂ ಉತ್ತರ ಪ್ರದೇಶದಲ್ಲಿ ತಲಾ 1, ಉತ್ತರ ಪ್ರದೇಶದ 8, ಪಶ್ಚಿಮ ಬಂಗಾಳದ 3 ಮತ್ತು ಜಮ್ಮು ಮತ್ತು ಕಾಶ್ಮೀರದ 1 ಲೋಕಸಭಾ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ದಕ್ಷಿಣದ ಜಿಲ್ಲೆಗಳ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ.























































































































































error: Content is protected !!
Scroll to Top