ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಪ್ರಕ್ರಿಯೆ ಆರಂಭ

ದೆಹಲಿ : 2025ರ ಸಾಲಿನ ಪದ್ಮ ಪ್ರಶಸ್ತಿಗೆ ಆನ್‌ಲೈನ್ ನಾಮನಿರ್ದೇಶನ ಮತ್ತು ಶಿಫಾರಸು ಪ್ರಕ್ರಿಯೆ ಶುರುವಾಗಿದೆ. ಮೇ.1ರಂದು ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಅಥವಾ ನಾಮನಿರ್ದೇಶನ ಮಾಡಲು ಸೆಪ್ಟೆಂಬರ್ 15ರವರೆಗೆ ಅವಕಾಶ ಇದೆ. ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಈ ಪ್ರಶಸ್ತಿಯಲ್ಲಿ ಸೇರಿದೆ.

1954ರಿಂದ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಇದನ್ನು ಘೋಷಣೆ ಮಾಡಲಾಗುತ್ತದೆ. ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆಗಳಂತಹ ಎಲ್ಲಾ ಕ್ಷೇತ್ರಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಅಥವಾ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುವುದು. ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ಭೇದವಿಲ್ಲದೆ ಈ ಪ್ರಶಸ್ತಿಯನ್ನು ರಾಷ್ಟ್ರಪತಿಗಳು ನೀಡುತ್ತಾರೆ.

‘ಜನರ ಪದ್ಮ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪದ್ಮ ಪ್ರಶಸ್ತಿಗಳನ್ನು ‘ಜನರ ಪದ್ಮ’ವನ್ನಾಗಿ ಪರಿವರ್ತಿಸಲು ಬದ್ಧವಾಗಿದೆ ಎಂದು ಹೇಳಿದೆ. ಹಾಗಾಗಿ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಸ್ವೀಕರಿಸಲಾಗುತ್ತದೆ. ಇಲ್ಲಿ ಜನರೇ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಈ ಸೈಟ್​​ನಲ್ಲಿ ನಾಮನಿರ್ದೇಶನಗಳು ಮಾಡಬಹುದು.











































error: Content is protected !!
Scroll to Top