ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಮತ್ತು ಮಾಜಿ ಸಚಿವ ಎಚ್. ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳವುದನ್ನು ನಿರ್ಬಂಧಿಸುವವಂತೆ ಕೋರಿ‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶರು ಎಚ್. ಡಿ ದೇವೇಗೌಡ ಮತ್ತು ಎಚ್. ಡಿ ಕುಮಾರಸ್ವಾಮಿ ಹೆಸರು ಬಳಸಂತೆ ದೃಶ್ಯ ಮಾಧ್ಯಮಗಳು, ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.























































































































































error: Content is protected !!
Scroll to Top