ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ದೆಹಲಿ : ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ಅವರ ನ್ಯಾಯಾಂಗ ಬಂಧನವನ್ನು ಮೇ 20 ರವರೆಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ವಿಸ್ತರಿಸಿದೆ. ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇದರ ಮಧ್ಯೆ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ಕೇಜ್ರಿವಾಲ್ ಅವರನ್ನು ಮಾ. 21 ರಂದು ಬಂಧಿಸಲಾಯಿತು ಮತ್ತು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಸುಪ್ರೀಂ ಕೋರ್ಟ್ ಏ. 15 ರಂದು ಇಡಿಗೆ ನೋಟಿಸ್ ಜಾರಿ ಮಾಡಿತ್ತು. ಕೇಜ್ರಿವಾಲ್ ಅವರ ಬಂಧನದ ವಿರುದ್ಧದ ಮನವಿಗೆ ಪ್ರತಿಕ್ರಿಯೆ ಕೇಳಿತ್ತು. ಏ. 9 ರಂದು, ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಅವರ ಬಂಧನವನ್ನು ಎತ್ತಿಹಿಡಿದಿತ್ತು.























































































































































error: Content is protected !!
Scroll to Top