ಮೇ. 9 – 14 : ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ರಥೋತ್ಸವ

ಕಾರ್ಕಳ : ಸುಮಾರು 550 ವರ್ಷಗಳ ಸುದೀರ್ಘ ಇತಿಹಾಸವಿರುವ ಪಡು ತಿರುಪತಿ ಖ್ಯಾತಿಯ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನವು ನಿತ್ಯ ಉತ್ಸವದ ತಾಣವಾಗಿ ನಾಡಿನಲ್ಲಿ ಪ್ರಸಿದ್ದಿಯನ್ನು ಪಡೆದಿದೆ. ಅದರಲ್ಲಿಯೂ ಏಪ್ರಿಲ್‌ -ಮೇ ತಿಂಗಳಲ್ಲಿ ನಡೆಯುವ ರಥೋತ್ಸವ ಮತ್ತು ಡಿಸೆಂಬರ್ ತಿಂಗಳಲ್ಲಿ ನಡೆಯುವ ಲಕ್ಷ ದೀಪೋತ್ಸವ ಇವು ಎರಡು ದೊಡ್ಡ ಉತ್ಸವಗಳು. ಈ ಬಾರಿ ರಥೋತ್ಸವ ಮೇ. 9ರಂದು ಪ್ರಾರಂಭಗೊಂಡು ಮೇ 14 ರವರೆಗೆ ನಡೆಯಲಿದೆ.

ಕಾರ್ಯಕ್ರಮಗಳು ಇಂತಿವೆ,
ಮೇ 9 – ಧ್ವಜಾರೋಹಣ
ಮೇ 10- ಅಕ್ಷಯ ತೃತೀಯ
ಮೇ 11 – ಕಟ್ಟೆ ಪೂಜೆ
ಮೇ 12 – ಮೃಗಬೇಟೆ ಉತ್ಸವ
ಮೇ 13 – ಬ್ರಹ್ಮ ರಥೋತ್ಸವ
ಮೇ 14 – ಅವಭೃತ

ಪರ್ಯಾಯ ಮಾರ್ಗದ ವಿವರ:
ಮೇ 13 ರಂದು ಸಂಜೆ 4 ಗಂಟೆಯಿಂದ ಮೇ 14 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‍ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಘನವಾಹನಗಳು ಬಂಗ್ಲೆಗುಡ್ಡೆ-ಹಿರಿಯಂಗಡಿ-ಪುಲ್ಕೆರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡು ರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‍ಗಳು ತಾಲೂಕು ಜಂಕ್ಷನ್‍ನಿಂದ ಕಲ್ಲೊಟ್ಟೆ, ಮಾರ್ಕೆಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಮೂರು ಮಾರ್ಗದಲ್ಲಿ ಸಂಚರಿಸುವ ಲಘು ವಾಹನ ಮತ್ತು ದ್ವಿಚಕ್ರ ವಾಹನಗಳು ಸ್ಟೇಟ್ ಬ್ಯಾಂಕ್ ಜಂಕ್ಷನ್‍ನಿಂದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.























































































































































error: Content is protected !!
Scroll to Top