ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಆತ್ಮಹತ್ಯೆ

ಸುಳ್ಯ: ಕಾಲೇಜು ವಿದ್ಯಾರ್ಥಿಯೋರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಸುಳ್ಯ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿನಿ, ಸಂಪಾಜೆ ಗ್ರಾಮದ ದೊಡ್ಡಡ್ಕ ಗೋಪಾಲ ಹಾಗೂ ಬಾಬಿ ದಂಪತಿಯ ಪುತ್ರಿ ರಶ್ಮಿತಾ ಅವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಶ್ಮಿತಾ ಅವರಿಗೆ 16 ವರ್ಷ ವಯಸ್ಸಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.















































error: Content is protected !!
Scroll to Top