ಕಾರ್ಕಳ : ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕಾಬೆಟ್ಟುವಿನಲ್ಲಿ 2018 ರಲ್ಲಿ ಆರಂಭಗೊಂಡ ಈ ಶಿಕ್ಷಣ ಸಂಸ್ಥೆಯು ಕರ್ನಾಟಕ ಸರಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ ಒಳಪಟ್ಟು ಎಐಸಿಟಿಇ ದೆಹಲಿಯಿಂದ ಮಾನ್ಯತೆಯನ್ನು ಪಡೆದಿದೆ. ಇಲ್ಲಿ 3 ವರ್ಷ ಅವಧಿಯ ಸಿವಿಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್, ಎಲೆಕ್ಟಾನಿಕ್ಸ್ ಆಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಕೋರ್ಸ್ ಶಿಕ್ಷಣ ನೀಡಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಮೇ 9 ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು ಮೇ 14ರವರೆಗೆ ನಡೆಯಲಿದೆ. ಎಸ್ಸೆಸೆಲ್ಸಿ ಉತ್ತೀರ್ಣ ಅಥವಾ ಪಿಯುಸಿ ಉತ್ತೀರ್ಣ/ಅನುತ್ತೀರ್ಣ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿಗೆ ಭೇಟಿ ನೀಡಬಹುದು ಎಂದು ಕಾಲೇಜು ಪ್ರಕಟನೆಯಲ್ಲಿ ತಿಳಿಸಿದೆ.
ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜು – ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ



































