ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಂಧನ

ಸುಳ್ಯ : ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಮೇ 10ರಂದು ಬಂಧಿಸಲಾಗಿದೆ. ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಶಾಂತಿನಗರದ ಮುಸ್ತಾಫ ಪೈಚಾರ್‌ @ಮಹಮ್ಮದ್‌ ಮುಸ್ತಾಫ ಎಸ್‌ (43) ಎಂಬಾತನನ್ನು ಶುಕ್ರವಾರ ಬೆಳಗ್ಗೆ 7 ಗಂಟೆಗೆ ಬಂಧನ ಮಾಡಲಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೆಂಗಳೂರು ಎನ್‌ಐಎ ಇನ್ಸ್‌ಪೆಕ್ಟರ್‌ ಷಣ್ಮುಂಗಮ್‌ ನೇತೃತ್ವದ ತಂಡ ಆರೋಪಿಯನ್ನು ಬಂಧನ ಮಾಡಿದೆ. ಆಶ್ರಯ ನೀಡಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಜುಲೈ 26, 2022 ರಂದು ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಆರೋಪಿ ಮುಸ್ತಫಾ ಪೈಚಾರಿಗೆ ಎನ್‌ಐಎ ಲುಕ್‌ಔಟ್‌ ನೋಟಿಸ್‌ ಈಗಾಗಲೇ ಹೊರಡಿಸಿದ್ದು, ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಿತ್ತು.







































































error: Content is protected !!
Scroll to Top