ಆಂಧ್ರಪ್ರದೇಶ : ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನಟಿ ಪವಿತ್ರಾ ಜಯರಾಂ (35) ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಡ್ಯದವರಾಗಿದ್ದ ಪವಿತ್ರಾ, ತೆಲುಗಿನ ತ್ರಿನಯನಿ ಧಾರಾವಾಹಿ ಮೂಲಕ ತೆಲುಗು ಪ್ರೇಕ್ಷಕರಿಗೂ ಹತ್ತಿರವಾಗಿದ್ದರು.
ಕರ್ನಾಟಕ ಮೂಲದ ನಟಿ ಪವಿತ್ರಾ ಜಯರಾಂ ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಕನ್ನಡದ ರೋಬೋ ಫ್ಯಾಮಿಲಿ ಹಾಸ್ಯ ಧಾರಾವಾಹಿ ಮೂಲಕ ನಟನೆಗೆ ಎಂಟ್ರಿ ಕೊಟ್ಟಿದ್ದ ಪವಿತ್ರಾ ಜಯರಾಂ. ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ಪವಿತ್ರಾ ತೆಲುಗು ಪ್ರೇಕ್ಷಕರಿಗೂ ಸಹ ಬಹಳ ಹತ್ತಿರವಾಗಿದ್ದರು.
ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿದೆ. ಭೀಕರ ಅಪಘಾತದಲ್ಲಿ ನಟಿ ಪವಿತ್ರಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪವಿತ್ರಾ ಜಯರಾಂ ಜೊತೆಗೆ ಕಾರಿನಲ್ಲಿ ಅವರ ಕುಟುಂಬಕ್ಕೆ ಸಂಬಂಧಿಸಿದವರು ಇದ್ದರು ಎನ್ನಲಾಗುತ್ತಿದೆ.
































































