ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ರಘುಪತಿ ಭಟ್‌ ಸ್ಪರ್ಧಿಸಲು ನಿರ್ಧಾರ

ಉಡುಪಿ : ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಟಿಕೆಟ್‌ ಕೈ ತಪ್ಪಿದ ಬಳಿಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ಘೋಷಿಸಿದ್ದಾರೆ

ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ ಬಿಜೆಪಿಯಲ್ಲೇ ಇರುತ್ತೇನೆ, ಗೆದ್ದರೂ ಬಿಜೆಪಿಯಲ್ಲೇ ಇರುತ್ತೇನೆ. ಇದು ಯಾವುದೇ ಬಂಡಾಯ ಅಥವಾ ಪಕ್ಷ, ವ್ಯಕ್ತಿ ವಿರುದ್ಧವಲ್ಲ. ನನಗಾಗಿ, ಜನರ ಸೇವೆಗಾಗಿ ಕೆಲಸ ಮಾಡಲು ಈ ನಿರ್ಧಾರ ಮಾಡಿದ್ದೇನೆ ಎಂದು ರಘುಪತಿ ಹೇಳಿದ್ದಾರೆ.

ಕರಾವಳಿಗೆ ಪಕ್ಷದಿಂದ ಅನ್ಯಾಯವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದೇನೆ. ಪಕ್ಷದ ನಾಯಕರು ನನಗೆ ಈ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಶಿಕ್ಷಕರ ಸಮುದಾಯ ಮತ್ತು ಪದವೀಧರ ಸಮುದಾಯ ನನಗೆ ಬೆಂಬಲ ನೀಡಿದೆ. ಆದರೆ ಈಗ ನಿರ್ಧಾರ ಬದಲಾಗಿದೆ ಎಂದ ಭಟ್‌ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತಿರಲಿಲ್ಲ. ಆದರೆ ಹಣ ಬಲ, ಜಾತಿ ಬಲಕ್ಕೆ ಟಿಕೆಟ್ ಸಿಕ್ಕಿದೆ. ಹೀಗಾಗಿ ಜನರೊಂದಿಗೆ ಇದ್ದು ಕೆಲಸ ಮಾಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧಾರ ಮಾಡಿದ್ದೇನೆ ಎಂದು ಹೇಳಿದರು





























































































































error: Content is protected !!
Scroll to Top