ಅಮೃತ ಭಾರತಿ – ಸಿಬಿಎಸ್ಇ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಕೇಂದ್ರ ಸಿಬಿಎಸ್ಇ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿಕೊಂಡಿದೆ. ವಿದ್ಯಾರ್ಥಿನಿ ಅನನ್ಯ ಸಿ.ಕೆ. ಶೇ. 96.6 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿರುತಾಳೆ. ಪ್ರಖ್ಯಾತ ಪಿ. ನಾಯಕ್ (95.6%), ಪ್ರಶುಲ್ ಸಂತೋಷ್ ಶೆಟ್ಟಿ (94%), ಶ್ರೀದತ್ತ (91.4%), ಪ್ರಾಪ್ತಿ (91), ನಿಹಾಲ್ (90%) ಅಂಕ ಗಳಿಸಿರುತ್ತಾರೆ. ಪರೀಕ್ಷೆಗೆ ಹಾಜರಾಗಿದ್ದ 90 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 59 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.































































































































error: Content is protected !!
Scroll to Top