ಬೋರ್ಡ್ ಹೈಸ್ಕೂಲ್ ಶೇ. 100 ಫಲಿತಾಂಶ

ಕಾರ್ಕಳ : 2023-24ನೇ ಸಾಲಿನ ಎಸ್ಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾರ್ಕಳ ಬೋರ್ಡ್‌ ಹೈಸ್ಕೂಲ್ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶೇ. 100% ಫಲಿತಾಂಶ ದಾಖಲಿಸಿದೆ. ಒಟ್ಟು 30 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಓರ್ವ ವಿದ್ಯಾರ್ಥಿ ವಿಶಿಷ್ಟ ಶ್ರೇಣಿಯಲ್ಲಿ, 16 ಮಂದಿ ಪ್ರಥಮ ಶ್ರೇಣಿಯಲ್ಲಿ, 10 ಮಂದಿ ದ್ವಿತೀಯ ಹಾಗೂ 3 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕರು, ಅಧ್ಯಾಪಕ ವೃಂದದವರು, ಎಸ್‌ಡಿಎಂಸಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘದವರು ಅಭಿನಂದಿಸಿದ್ದಾರೆ.





























































































































error: Content is protected !!
Scroll to Top