ಬೆಂಗಳೂರು : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 12 ಮತ್ತು 10ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಿದ್ದು, ಬೆಂಗಳೂರು ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
ರಾಜಧಾನಿ ಬೆಂಗಳೂರಿನಲ್ಲಿ 12 ನೇ ತರಗತಿಯ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣವು ಶೇಕಡಾ 87.98 ಮತ್ತು 10 ನೇ ತರಗತಿಯ ಉತ್ತೀರ್ಣ ಶೇಕಡಾ 93.60 ಆಗಿದೆ. ದೇಶದ 17 ಪ್ರಾಂತ್ಯಗಳಲ್ಲಿ ಬೆಂಗಳೂರು 12 ನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 96.95 ರಷ್ಟು ಉತ್ತೀರ್ಣರಾಗುವುದರೊಂದಿಗೆ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದರೆ, ತಿರುವನಂತಪುರವು ಅತ್ಯಧಿಕ ಶೇಕಡಾ 99.91 ನ್ನು ದಾಖಲಿಸಿದೆ.
12ನೇ ತರಗತಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 16.33 ಲಕ್ಷ ವಿದ್ಯಾರ್ಥಿಗಳ ಪೈಕಿ 16.21 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 14.26 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕರಿಗಿಂತ ಬಾಲಕಿಯರೇ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಒಟ್ಟಾರೆಯಾಗಿ, 1.16 ಲಕ್ಷ ವಿದ್ಯಾರ್ಥಿಗಳು ಶೇಕಡಾ 90ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದರೆ, 24,068ರಷ್ಟು ವಿದ್ಯಾರ್ಥಿಗಳು ಶೇಕಡಾ 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ.

10ನೇ ತರಗತಿ ಪರೀಕ್ಷೆಯಲ್ಲಿ ಬೆಂಗಳೂರಿನ ವಿದ್ಯಾರ್ಥಿಗಳು ಶೇ 99.26ರಷ್ಟು ಉತ್ತೀರ್ಣರಾಗುವ ಮೂಲಕ ನಾಲ್ಕನೇ ಸ್ಥಾನ ಗಳಿಸಿದೆ. ಇಲ್ಲಿಯೂ ಬಾಲಕರಿಗಿಂತ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕಿಯರ 92.71 ಕ್ಕೆ ಹೋಲಿಸಿದರೆ ಹುಡುಗಿಯರು 94.75 ಶೇಕಡಾವನ್ನು ದಾಖಲಿಸಿದ್ದಾರೆ.































































