ಮುನಿಯಾಲು : ಬೈಕ್‌ ಡಿಕ್ಕಿ – ಸವಾರ ಸಾವು

ಹೆಬ್ರಿ : ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಸವರಾ ಸಾವನಪ್ಪಿದ ಘಟನೆ ಮುನಿಯಾಲಿನಲ್ಲಿ ಮೇ 12ರಂದು ಸಂಭವಿಸಿದೆ. ಭಾಸ್ಕರ (52) ಎಂಬವರು ಮೃತ ದುರ್ದೈವಿ. ಇವರು ತನ್ನ ಬೈಕ್‌ನಲ್ಲಿ ಮುದ್ರಾಡಿ ಕಡೆಯಿಂದ ಮುನಿಯಾಲು ಕಡೆಗೆ ಹೋಗುತ್ತಿರುವಾಗ ಮುನಿಯಾಲು ಕಾಲೇಜ್ ಮುಂಭಾಗದಲ್ಲಿ ಮುನಿಯಾಲು ಕಡೆಯಿಂದ ಮುದ್ರಾಡಿ ಕಡೆಗೆ ಸಂದೀಪ್‌ ಎಂಬವರು ಸವಾರಿ ಮಾಡಿಕೊಂಡು ಬರುತ್ತಿದ್ದ ಬೈಕ್‌ ಡಿಕ್ಕಿಯಾಗಿದೆ. ಪರಿಣಾಮವಾಗಿ ಭಾಸ್ಕರ್‌ ಬೈಕ್‌ ಸಮೇತ ರಸ್ತೆಗೆ ಬಿದ್ದಿದ್ದಾರೆ. ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿದ ವೈದ್ಯರು ಭಾಸ್ಕರ್‌ ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಳ್ತೂರು : ಮನೆಯ ಬಾಗಿಲು ಮುರಿದು ಆಭರಣ ಕಳವು
ಹೆಬ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದ ರಾಕೇಶ್‌ ಮತ್ತು ಅವರ ಪತ್ನಿ ಮೇ 12ರಂದು ಬೆಳಗ್ಗೆ 11.30ಕ್ಕೆ ಮನೆಗೆ ಬೀಗ ಹಾಕಿ ಹೊರ ಹೋಗಿದ್ದು, ಮಧ್ಯಾಹ್ನ 3 ಗಂಟೆಗೆ ವಾಪಾಸು ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಗಮನಕ್ಕೆ ಬಂದಿರುತ್ತದೆ. ಯಾರೋ ಕಳ್ಳರು ಮನೆಯ ಬಾಗಿಲು ಮುರಿದು ಒಳಗೆ ಹೋಗಿ ಕಪಾಟಿನ ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ತೆಗೆದು ಅದರಲ್ಲಿದ್ದ ಮೂರು ಲಕ್ಷ ಎಪ್ಪತೈದು ಸಾವಿರ ರೂಪಾಯಿ ಮೌಲ್ಯದ ಬಂಗಾರದ ಮತ್ತು ಬೆಳ್ಳಿಯ ಸ್ವತ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹೆಬ್ರಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯ ಕುಕ್ಕುಂದೂರು ಗ್ರಾಮದಲ್ಲಿ ಸಂಭವಿಸಿದೆ. ಮಂಜುನಾಥ (60) ನೇಣಿಗೆ ಶರಣಾದವರು. ಇವರು ಮೇ 12ರ ರಾತ್ರಿ 11:30ರಿಂದ ಮೇ 13ರ ಬೆಳಗ್ಗೆ 7:30 ಗಂಟೆಯ ಮದ್ಯಾವಧಿಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.





























































































































error: Content is protected !!
Scroll to Top