ಅಪಹರಣ ಪ್ರಕರಣ : ರೇವಣ್ಣ ಜೈಲಿಂದ ಬಿಡುಗಡೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ. ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಸೋಮವಾರ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮೇ 14ರಂದು ಬಿಡುಗಡೆ ಮಾಡಲಾಗಿದೆ.

ರೇವಣ್ಣ ಅವರು ಮಂಗಳವಾರ ಬಿಡುಗಡೆಯಾಗುತ್ತಾರೆ ಎಂಬ ವಿಚಾರ ತಿಳಿದಿದ್ದ ಅವರ ಬೆಂಬಲಿಗರು ಮತ್ತು ನೂರಾರು ಜೆಡಿಎಸ್​ ಕಾರ್ಯಕರ್ತರು ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದರು. ಹೆಚ್​ಡಿ ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದರು.

ಒಟ್ಟು 11 ದಿನಗಳ ವನವಾಸದಿಂದ ಎಚ್.ಡಿ. ರೇವಣ್ಣ ಮುಕ್ತರಾದರು. ಈ ವೇಳೆ ರೇವಣ್ಣ ಪರ ವಕೀಲರು ಜಾಮೀನು ಷರತ್ತುಗಳನ್ನು ಪೂರೈಸಿದರು. ರೇವಣ್ಣ ಪಾಸ್ ಪೋರ್ಟ್, ಇಬ್ಬರು ಶ್ಯೂರಿಟಿ, ಐದು ಲಕ್ಷ ರೂಪಾಯಿ ಬಾಂಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ವಕೀಲರು ಸಲ್ಲಿಸಿದ ಬಳಿಕ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಯಿತು.































































































































error: Content is protected !!
Scroll to Top