ಡಾಕ್ಟರ್‌ ಏಟಿಗೆ ರೋಗಿ ಸಾವು!

ಮಂಗಳೂರು: ಡಾಕ್ಟರ್‌ ಕೊಟ್ಟ ಏಟಿಗೆ ರೋಗಿ ಮೃತಪಟ್ಟ ಘಟನೆ ಧರ್ಮಸ್ಥಳ ಪೊಲೀಸ್‌ ಠಾಣೆ ವ್ಯಾಪ್ತಿಯ ಕೊಕ್ಕಡ ಗ್ರಾಮದ ಜೋಡುಮಾರ್ಗ ಎಂಬಲ್ಲಿ ಸೋಮವಾರ ಸಂಜೆ ಸಂಭಿವಿಸದೆ.
ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಂದ ರೋಗಿಗೆ ಅವರ ಪರಿಚಿತರೇ ಆದ ಪಶುವೈದ್ಯರು ಕ್ಷೇಮ ವಿಚಾರಿಸಿ ಕೊಟ್ಟ ಏಟೇ ಪ್ರಾಣಕ್ಕೆ ಮುಳುವಾಯಿತು ಎನ್ನಲಾಗಿದೆ. ಪಟ್ರಮೆ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಹಲ್ಲೆಗೊಳಗಾಗಿ ಸಾವನ್ನಪ್ಪಿದವರು.

ಕೃಷ್ಣ ವಿಪರೀತ ಜ್ವರದಿಂದ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕೊಕ್ಕಡಕ್ಕೆ ಬಂದಿದ್ದಾರೆ. ಈ ಸಂದರ್ಭ ತನ್ನ ಪರಿಚಿತರೇ ಆದ ಕೊಕ್ಕಡದ ಪಶು ವೈದ್ಯ ಡಾ. ಕುಮಾರ್‌ ಅವರು ಕೃಷ್ಣ ಅವರಲ್ಲಿ ಮಾತನಾಡುತ್ತ ಜ್ವರ ಇದ್ದು ಇಷ್ಟು ಬೇಗ ಆಸ್ಪತ್ರೆಯಿಂದ ಯಾಕೆ ಬಂದೆ? ಆರೋಗ್ಯ ಸುಧಾರಿಸಿ ಬರಬೇಕಿತ್ತು ಎಂದು ಬುದ್ಧಿಮಾತು ಹೇಳಿ ಒಂದು ಏಟು ಹೊಡೆದಿದ್ದಾರೆ ಎನ್ನಲಾಗಿದೆ.
ಪಶು ವೈದ್ಯರು ಹೊಡೆದ ರಭಸಕ್ಕೆ ಕೃಷ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೆಲ ಹೊತ್ತಿನಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.































































































































error: Content is protected !!
Scroll to Top