ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಸಾಗಿಸುತ್ತಿದ್ದ 6.50 ಲ.ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಪೊಲೀಸರು ಈ ಸಂಬಂಧ ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಮಾರಾಟ ಮಾಡುವ ಉದ್ದೇಶದಿಂದ 270 ಗ್ರಾಂ 270 ಗ್ರಾಂ ಎಂಡಿಎಂಎ ಅನ್ನು ಅವರು ಮಂಗಳೂರಿಗೆ ಸಾಗಿಸುತ್ತಿದ್ದರು.
ಆರೋಪಿಗಳನ್ನು ಅಡ್ಡೂರು ಗ್ರಾಮದ ಬಂಡ್ಸಾಲೆ ಹೌಸ್ ಮೊಹಮ್ಮದ್ ಸಿನಾನ್ ಅಬ್ದುಲ್ಲಾ (23), ಬಂದರಿನ ಮೊಹಮ್ಮದ್ ನೌಮಾನ್(22), ಬೋಳಿಯಾರ್ ಗ್ರಾಮದ ಮೊಹಮ್ಮದ್ ಸಫೀಲ್(23), ಮೊಹಮ್ಮದ್ ಅಮೀನ್ ರಾಫಿ ಗುರುತಿಸಲಾಗಿದೆ.
ಕಾರಿನಲ್ಲಿ ನಗರಕ್ಕೆ ಮಾದಕ ವಸ್ತು ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರಾಚರಣೆ ಮಾಡಿ ಕಾರಿನ ಸಮೇತ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ದೇರಳಕಟ್ಟೆಯ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಸಾಗಿಸುತ್ತಿದ್ದ ಕಾರನ್ನು ಪತ್ತೆಹಚ್ಚಿ ಕಾರಿನಲ್ಲಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು.
ಆರೋಪಿಗಳ ಬಳಿಯಿದ್ದ 6,50,000- ರೂ. ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500 ಅಂದಾಜಿಸಲಾಗಿದೆ.
15 ಲ.ರೂ. ಮೌಲ್ಯದ ಮಾದಕ ವಸ್ತು, ಕಾರು ವಶ : ನಾಲ್ವರ ಬಂಧನ






























































