ಮೇ 31ಕ್ಕೆ ಮುಂಗಾರು ಕೇರಳ ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಲ್ಲಿ: ಕಳೆದದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರಗಾಲ ಎದುರಿಸುತ್ತಿದ್ದ ಜನರಿಗೆ ಭಾರತೀಯ ಹವಾಮಾನ ಇಲಾಖೆ ಈ ಸಲ ಸಿಹಿ ಸುದ್ದಿ ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಈ ಸಲ ಮುಂಗಾರು ಕ್ಲಪ್ತ ಸಮಯಕ್ಕೆ ಆಗಮಿಸಲಿರುವುದು ಮಾತ್ರವಲ್ಲದೆ ಧಾರಾಕಾರ ಮಳೆಯೂ ಸುರಿಯಲಿದೆ.
ಮಳೆ ಕುರಿತು ತಾಜಾ ಮಾಹಿತಿ ನೀಡಿರುವ ಇಲಾಖೆ ಮುಂಗಾರು ಮಾರುತ ಮೇ 31ರ ಒಳಗಾಗಿ ಕೇರಳದ ಕರಾವಳಿಯನ್ನು ಪ್ರವೇಶಿಸಲಿದೆ.
ಈ ವರ್ಷ ನೈಋತ್ಯ ಮುಂಗಾರು ಮೇ 31ರ ವೇಳೆಗೆ ಕೇರಳ ಪ್ರವೇಶಿಸುವ ಸಂಭವವಿದೆ. ಈ ದಿನಾಂಕದಲ್ಲಿ 4 ದಿನ ಹಿಂದು-ಮುಂದು ಆಗಬಹುದು. ಸಾಮಾನ್ಯವಾಗಿ ಜೂ.1ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸುವ ವಾಡಿಕೆ ಹೊಂದಿದ್ದು, ಅದೇ ಸಮಯವೇ ಈ ವರ್ಷವೂ ಪಾಲನೆಯಾಗಬಹುದು ಎಂದು ಹೇಳಿದೆ.
ಕಳೆದ ವರ್ಷ ಮುಂಗಾರು ಪ್ರವೇಶವೇ 8 ದಿನ ತಡವಾಗಿತ್ತು. ಅನಂತವೂ ಪೂರ್ಣ ಪ್ರಮಾಣದಲ್ಲಿ ಮಳೆಯಾಗದೆ ಈ ವರ್ಷ ಭೀಕರ ಬರಗಾಲ ಬಂದಿದೆ.

ಜೂನ್‌- ಸೆಪ್ಟೆಂಬರ್‌ ಅವಧಿಯಲ್ಲಿ ದೇಶದಲ್ಲಿ ಮಳೆ ಸುರಿಸುವ ಮುಂಗಾರು ಮಾರುತಗಳ ಈ ಬಾರಿ ದೀರ್ಘಕಾಲೀನ ಸರಾಸರಿಗಿಂತ ಹೆಚ್ಚಿ ಮಳೆ ಸುರಿಸಬಹುದು ಎಂದು ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದೆ. ನೈಋತ್ಯ ಮಾನ್ಸೂನ್ ಭಾರತಕ್ಕೆ ಪ್ರಮುಖ ಮಳೆಯನ್ನು ತರುವ ಕಾಲ. ಇದು ದೇಶದ ವಾರ್ಷಿಕ ಮಳೆಯ ಬಹುಪಾಲನ್ನು ಒದಗಿಸುತ್ತದೆ.
2023ರಲ್ಲಿ ಜೂ.8ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶ ಮಾಡಿದ್ದವು. ಅಂದರೆ ಸಾಮಾನ್ಯ ಪ್ರವೇಶದ ದಿನಕ್ಕಿಂತ 7 ದಿನ ವಿಳಂಬವಾಗಿ ಆಗಮನವಾಗಿತ್ತು. ಕಳೆದ ವರ್ಷ ದೇಶದಲ್ಲಿ ದೀರ್ಘಕಾಲೀನ ಸರಾಸರಿಯ ಶೇ.93ರಷ್ಟು ಮಳೆ ಸುರಿದಿತ್ತು.































































































































error: Content is protected !!
Scroll to Top