ನಿಟ್ಟೆ : ಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಇಬ್ಬರು ಕಾರ್ಮಿಕರ ದುರ್ಮರಣ

ಕಾರ್ಕಳ : ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ನಿಟ್ಟೆ ಭ್ರಾಮರಿ ಕ್ರಾಸ್ ನಲ್ಲಿ ಮೇ 18ರ ಸಂಜೆ ಸಂಭವಿಸಿದೆ.

ನಿಟ್ಟೆ ಗ್ರಾಮದ ದೂಪದಕಟ್ಟೆ ಮರಿಪರಪುವಿನಿಂದ ಕಲ್ಲು ಲೋಡ್ ಮಾಡಿ ಮಂಗಳೂರು ಹೊರಡುವಾಗ ಲಾರಿ ನಿಯಂತ್ರಣ ತಪ್ಪಿ ಹೊಂಡಕ್ಕುರುಳಿದೆ. ಪರಿಣಾಮ ಕೊಪ್ಪಳ ಜಿಲ್ಲೆ ಎಲಬುರ್ಗಿ ದೇವಾಳಪುರದ ಕರಿಯಪ್ಪ (22) ಮತ್ತು ನರಿಯಪ್ಪ (27) ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





























































































































error: Content is protected !!
Scroll to Top