ಬೆಂಗಳೂರು : ರಾಜ್ಯದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಜೂನ್ 13ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ
ಚುನಾವಣೆಯ ಪ್ರಮುಖ ದಿನಾಂಕಗಳು
2024 ಮೇ 27ರಂದು ಚುನಾವಣಾ ಅಧಿಸೂಚನೆ
2024, ಜೂ. 3ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನ
2024, ಜೂ. 4ರಂದು ನಾಮಪತ್ರ ಪರಿಶೀಲನೆ
2024, ಜೂ. 6ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
2024, ಜೂ. 13ರಂದು ಮತದಾನ
2024, ಜೂ. 13ರ ಸಂಜೆ 5ಗಂಟೆಗೆ ಮತದಾನ ಎಣಿಕೆ
ಅರವಿಂದ ಕುಮಾರ್ ಅರಳಿ, ಎನ್.ಎಸ್.ಬೋಸರಾಜ್,ಕೆ.ಗೋವಿಂದರಾಜ್, ಡಾ.ತೇಜಶ್ವಿನಿ ಗೌಡ, ಮುನಿರಾಜುಗೌಡ, ಕೆ.ಪಿ.ನಂಜುಂಡಿ, ರಘುನಾಥ್ ರಾವ್ ಮಲ್ಕಾಪುರೆ, ಎನ್.ರವಿ ಕುಮಾರ್, ಎಸ್.ರುದ್ರೇಗೌಡ, ಎಚ್.ಹರೀಶ್ ಕುಮಾರ್, ಬಿ.ಎಂ.ಫಾರೂಕ್ ಅವರ ಅವಧಿ ಕೊನೆಗೊಳ್ಳಲಿದೆ.

























