ಸಮುದ್ರ ಪ್ರಕ್ಷುಬ್ಧ ಸಾಧ್ಯತೆ : ಕಡಲಿಗಿಳಿಯದಂತೆ ಎಚ್ಚರಿಕೆ

ಉಡುಪಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತತವಾಗಿರುವುದರಿಂದ ಕರಾವಳಿಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳೀಗೆ ಹೈಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಮಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿಯಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಉರಿ ಬಿಸಿಲಿನ ನಡುವೆ ಮೋಡದ ವಾತಾವರಣ ಇರುವುದರಿಂದ ಉಷ್ಣತೆ ಹೆಚ್ಚಾಗುತ್ತಿದೆ. ಕುಂದಾಪುರ ಬೈಂದೂರಿನಲ್ಲಿ 37 ಸೆಲ್ಶಿಯಸ್‌ ಡಿಗ್ರಿ ತಾಪಮಾನ ದಾಖಲಾಗಿದೆ. ತಾಪಮಾನ ಏರಿಕೆಯಿಂದಾಗಿ ಸಮುದ್ರ ಪ್ರಕ್ಷ್ಯುಬ್ದವಾಗಿದೆ. ಈ ವಾರದಲ್ಲಿ ಗುಡುಗು ಸಿಡಿಲು ಮಳೆಯ ಮುನ್ನೆಚ್ಚರಿಕೆಯನ್ನು ಉಡುಪಿ ಜಿಲ್ಲಾಡಳಿತ ನೀಡಿದೆ. ಭಾರಿ ಗಾತ್ರದ ಸಮುದ್ರದಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕಿಳಿಯಬಾರದು ಅಂತ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.









































































































error: Content is protected !!
Scroll to Top